ದಿನಾಂಕ 15-2-2019 ನೇ ಶುಕ್ರವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಮ್ಮುಕಾಶ್ಮೀರದ ಆವಂತಿಪೋರದಲ್ಲಿ ನಡೆದ ಭಯೊತ್ಪಾದಕರ ದಾಳಿಯಲ್ಲಿ ಮಡಿದ ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ದೇಶದ ಇತಿಹಾಸದಲ್ಲಿ ಯೋಧರ ವೀರ ಮರಣ ಭಾರತಕ್ಕೆ ತುಂಬಲಾರದ ನಷ್ಟ. ಭಾರತವನ್ನು ಪ್ರೀತಿಸುವ ಪ್ರತಿಯೊಬ್ಬ ಭಾರತೀಯನು ಈ ಕೃತ್ಯವನ್ನು ಖಂಡಿಸಬೇಕು. ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ನಿದ್ರೆ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ವೀರ ಯೋಧರು ಕಾರಣ. ತಮ್ಮ ಮಗನನ್ನು ಕಳೆದುಕೊಂಡ ಪ್ರತಿ ತಾಯಿಗೆ, ಕುಟುಂಬದವರಿಗೆ ದುಃಖವನ್ನು ತಡೆಯುವ ಶಕ್ತಿ ದೇವರು ನೀಡಲಿ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ವೆಂಕಟೇಶ್ವರ ಅಮೈ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿ ನುಡಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಾಪಕ ವೃಂದ ಹಾಗೂ ಅಧ್ಯಾಪಕೇತರ ವೃಂದ ಉಪಸ್ಥಿತರಿದ್ದರು. ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ದೇಶಭಕ್ತಿಗೀತೆ ಹಾಡುವುದರ ಮೂಲಕ ಹಾಗೂ ಭಾರತ್ ಮಾತಾ ಕೀ ಜೈ ಘೋಷಣೆಯೊಂದಿಗೆ ವೀರಮರಣವಪ್ಪಿದ ಸೈನಿಕರಿಗೆ ಪ್ರಣಾಮಗಳನ್ನು ಅರ್ಪಿಸಿದರು.