ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ಮಕ್ಕಳಿಗೆ ಕಲಿಕಾ ಕೌಶಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಬೆಂಗಳೂರಿನ ಸಂಪನ್ಮೂಲ ವ್ಯಕ್ತಿ ಶ್ರೀ ಎಚ್. ಎ. ಜಯಸಿಂಹರವರು 4 ದಿನಗಳ ವಿಶೇಷ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾರ್ಯಾಗಾರದ ನಂತರ ಅವರು ಹತ್ತನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಅದಕ್ಕಾಗಿ ಹೇಗೆ ಅಧ್ಯಯನ ಮಾಡಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಮೊಬೈಲ್ ಮತ್ತು ಕಂಪ್ಯೂಟರ್‌ನಿಂದ ದೂರವಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳು ಬೇಗನೆ ಎದ್ದು ಸೂರ್ಯನನ್ನು ಹುಡುಕಬೇಕೇ ಹೊರತು ಸೂರ್ಯ ಬಂದು ನಮ್ಮನ್ನು ಹುಡುಕುವಂತಾಗಬಾರದು ನಿರಂತರ ಓದು ಸತತ ಅಧ್ಯಯನ ನಿಯಮಿತ ಆಹಾರಗಳೇ ವಿದ್ಯಾರ್ಥಿಗಳ ಯಶಸ್ಸಿನ ಗುಟ್ಟು ಎಂದು ಹೇಳಿದರು.