QR Code Business Card

ವಾರ್ಷಿಕ ಕ್ರೀಡಾಕೂಟ-2019-20

ಕ್ರೀಡೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಅವಿಭಾಜ್ಯ ಅಂಗ. ಸದೃಢ ಪ್ರಜೆಗಳು ದೇಶದ ಆಧಾರಸ್ಥಂಭಗಳು ಎಂದು ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಶಿವರಾಮ ಏನೇಕಲ್ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು. ಶಾಲಾ ಆಡಳಿತ ಮಂಡಳಿ ಸಂಚಾಲಕ ಶ್ರೀ ಮುರಳೀಧರ ಕ್ರೀಡಾಕೂಟವನ್ನು ದೀಪಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ| ಶಿವಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್ ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ರಶ್ಮಿ ಕಾರ್ಯಕ್ರಮ ನಿರೂಪಿಸಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಭಾಸ್ಕರ್ ಗೌಡ ಮತ್ತು ಅವರ ತಂಡದ ಸಹಕಾರದಿಂದ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಹಾಗೂ ಸಾಮೂಹಿಕ ಸಮತ ನಡೆಯಿತು. ವಿಶೇಷವಾಗಿ ಈ ಸಂದರ್ಭದಲ್ಲಿ ಶಾಲೆಯ ವಿವಿಧ ಕ್ರೀಡಾ ತಂಡಗಳ ಗುರುತಿನ ಸ್ವಾತಂತ್ರ್ಯ ಹೋರಾಟಗಾರರಾದ ಶಿವಾಜಿ, ರಾಣಾ ಪ್ರತಾಪ್, ಬಾಲ ಗಂಗಾಧರ ತಿಲಕ್ ಮತ್ತು ಸುಭಾಷ್ ಚಂದ್ರ ಬೋಸ್ ವೇಷಧಾರಿಗಳ ಉಪಸ್ಥಿತಿ ಆಕರ್ಷಕವಾಗಿತ್ತು.