ಕ್ರೀಡಾ ಭಾರತಿ ಪುತ್ತೂರು ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳು ವಿವೇಕನಗರ ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ದಿನಾಂಕ 19-02-2021 ರಂದು ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಚಂದ್ರಶೇಖರ್ ಅವರು ಮಾತನಾಡಿ ಸೂರ್ಯ ನಮಸ್ಕಾರ ಮಾಡುವುದರಿಂದ ಆಗುವ ಪ್ರಯೋಜನ ಮತ್ತು ರಥಸಪ್ತಮಿಯ ವಿಶೇಷತೆಯನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಮತ್ತೋರ್ವ ಅತಿಥಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಂಚಾಲಕರಾದ ಶ್ರೀ ರವಿನಾರಾಯಣ ಅವರು ಮಾತನಾಡಿ ಸೂರ್ಯ ನಮಸ್ಕಾರದ ಮಹತ್ವ ಮತ್ತು ಸೂರ್ಯನ ಬೆಳಕಿನಂತೆ ವಿದ್ಯಾರ್ಥಿಗಳ ಭವಿಷ್ಯವು ಪ್ರಜ್ವಲಿಸಲಿ ಎಂದು ಶುಭ ಹಾರೈಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ರವರು ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯಕುಮಾರಿ ವಂದಿಸಿದರು. ಶಿಕ್ಷಕಿ ಯಶೋಧ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಗೀತಾ ಡಿ. ರೈ ಉಪಸ್ಥಿತರಿದ್ದರು.
ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಗಿರೀಶ್ ನೆರವೇರಿಸಿದರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು. ಸುಮಾರು 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.