QR Code Business Card

ಸಂವಿಧಾನ ದಿನಾಚರಣೆ ಆಚರಣೆ

ದಿನಾಂಕ 26-11-2021 ನೇ ಶುಕ್ರವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಹಿರಿಯ ಶಿಕ್ಷಕರಾದ ಶ್ರೀ ರಾಧಾಕೃಷ್ಣರವರು 1200 ವಿದ್ಯಾರ್ಥಿಗಳಿಗೆ ಸಂವಿಧಾನ ದಿನದ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ನಂತರ ಮಾತನಾಡಿದ ಅವರು ಭಾರತ ದೇಶದ ಸಂವಿಧಾನವನ್ನು 1949 ನವೆಂಬರ್ 26 ರಂದು ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಆ ಮೂಲಕ ಸ್ವತಂತ್ರ ಭಾರತದಲ್ಲಿ ನೂತನ ಕಾನೂನುಗಳು ಜಾರಿಯಾಯಿತು. ಇದಕ್ಕೆ ಪ್ರಮುಖ ಕಾರಣಕರ್ತರಾದ ಡಾ. ಬಿ. ಆರ್‌. ಅಂಬೇಡ್ಕರ್‌ ಅವರನ್ನು ಸ್ಮರಿಸಬೇಕು. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ಭಾರತದ ಭವ್ಯ ಬುನಾದಿ ಇಂದಿಗೂ ಕಾಣಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ನಮೋ ನಮೋ ದೇಶಭಕ್ತಿಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.

The Celebration of Constitutional day in Vivekananda English Medium School, Tenkila, Puttur.D.K

The Constitutional day is organized in school premises on 26-11-2021, Friday. All the teaching and non-teaching staff assembled in the school Yadavashri Auditorium.

Assistant teacher Sri Radhakrishna Rai has spoken about the importance of the day and took the responsibility of Oath taking under the guidance of the Headmaster.