ಡಿಸೆಂಬರ್ 17 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಎರಡು ದಿನದ ’ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ತರಗತಿ ನಿರ್ವಹಣಾ ಕೌಶಲ್ಯಭಿವೃದ್ಧಿ ಕಾರ್ಯಾಗಾರವನ್ನು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ಆರಂಭವಾಯಿತು.
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ಮಹೇಶ್ ಪ್ರಸನ್ನರವರು ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿ, ಇಂದಿನ ಮಕ್ಕಳಿಗೆ ಜ್ಞಾನವೆನ್ನುವುದು ಕೇವಲ ಶಿಕ್ಷಕರಿಂದ ಮಾತ್ರ ದೊರೆಯುವುದಿಲ್ಲ. ಇಂದಿನ ತಂತ್ರಜ್ಞಾನದಲ್ಲಿ ಮಕ್ಕಳಿಗೆ ಬೇರೆ ಬೇರೆ ಮಾಧ್ಯಮಗಳಿಂದ ಮಾಹಿತಿಗಳು ದೊರೆಯುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರದ ಅವಶ್ಯಕತೆ ಇದೆ. ಮಕ್ಕಳ ಮನಃಸ್ಥಿತಿಯನ್ನು ಅರಿತು ಅವರಿಗೆ ಜ್ಞಾನವನ್ನು ತುಂಬುವ ಕೆಲಸಗಳಾಗಬೇಕು ಎಂದು ಹೇಳಿದರು.
ಡಿಸೆಂಬರ್ 17 ಮತ್ತು 18 ರಂದು ನಡೆಯಲಿರುವ 2 ದಿನಗಳ ಕಾರ್ಯಾಗಾರವನ್ನು ಹೆಲಿಕ್ಸ್ ಒಪನ್ ಸ್ಕೂಲ್, ಸೆಲಾಂನ ಮುಖ್ಯಸ್ಥರು ಹಾಗೂ ಅಂತರಾಷ್ಟ್ರೀಯ ತರಬೇತುದಾರರಾದ ಡಾ. ಸೆಂಥಿಲ್ ಕುಮಾರ್ ಇವರು ನಡೆಸಿಕೊಡಲಿದ್ದಾರೆ.
ಅವರು ಕಾರ್ಯಾಗಾರದಲ್ಲಿ ಮಾತನಾಡಿ ಒಬ್ಬ ಪರಿಪೂರ್ಣ ವ್ಯಕ್ತಿ 20 ರಿಂದ 30 ವರ್ಷದೊಳಗೆ ತನ್ನ ಗುರಿಯನ್ನು ತಲುಪಬೇಕು. ಪ್ರಸ್ತುತ ದಿನಗಳಲ್ಲಿ ಮಕ್ಕಳು ಇಂತಹ ಯೋಚನೆಗಳನ್ನು ಮಾಡಬೇಕು. ಪ್ರಸ್ತುತ ಜನ ಸಮುದಾಯ ಏಕಾಂಗಿತನದಿಂದ ಬಳಲುತ್ತಿದ್ದು ಅದನ್ನು ಪರಿಹರಿಸಬೇಕು ಕೆಲಸಗಳಾಗಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್.ಎಂ ಮಾತನಾಡಿ ಗುರುವು ಶಿಷ್ಯನ ಅಜ್ಞಾನವನ್ನು ದೂರ ಮಾಡಿ ಜ್ಞಾನವನ್ನು ತುಂಬಿದಾಗ ಮಾತ್ರ ಮಗುವಿನ ಸೂಕ್ತ ಪ್ರತಿಭೆಯನ್ನು ಹೊರತರಲು ಸಾಧ್ಯವಾಗುವುದು ಎಂದು ಹೇಳಿದರು. ಜೆ.ಸಿ.ಐ ಅಂತರಾಷ್ಟ್ರೀಯ ತರಬೇತುದಾರರು ಮತ್ತು ಶಾಲಾ ಆಡಳಿತ ಮಂಡಳಿ ಸದಸ್ಯ ಜೆ.ಸಿ. ಶ್ರೀ ಕೃಷ್ಣಮೋಹನ ಇವರ ಮಾರ್ಗದರ್ಶನದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕ ಶ್ರೀ ರವಿನಾರಾಯಣ ಮತ್ತು ಶಾಲಾ ಆಡಳಿತ ಮಂಡಳಿ ಸದಸ್ಯ ಶ್ರೀ ಕೃಷ್ಣಮೋಹನ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.
ಶ್ರೀಮತಿ ಶಾಂತಿ ಸ್ವಾಗತಿಸಿ, ಶಿಕ್ಷಕಿಯರು ಪ್ರಾರ್ಥಿಸಿ, ಶಿಕ್ಷಕಿ ಸಹನ ಪೈ ವಂದಿಸಿದರು. ಶಿಕ್ಷಕರಾದ ಶ್ರೀ ರಾಧಕೃಷ್ಣ ರೈ ಮತ್ತು ಶ್ರೀಮತಿ ಅನುರಾಧ ಕಾರ್ಯಕ್ರಮ ನಿರೂಪಿಸಿದರು.