ದಿನಾಂಕ 7-2-2022 ನೇ ಸೋಮವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ರಥಸಪ್ತಮಿಯ ಪ್ರಯುಕ್ತ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮವು ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾವಿರ ವಿದ್ಯಾರ್ಥಿಗಳು ಏಕಕಾಲದಲ್ಲಿ ಸೂರ್ಯನ ಕಿರಣಗಳ ಆಕಾರದಲ್ಲಿ ಕುಳಿತು ಮಂತ್ರ ಸಹಿತ ಸೂರ್ಯ ನಮಸ್ಕಾರವನ್ನು ಮಾಡಿದರು.
ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯಕ್ರಮವನ್ನು ನೆರವೇರಿಸಿ, ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.