ಆಧ್ಯಾತ್ಮಿಕ ವಿಚಾರಗಳನ್ನು ಇಡೀ ಪ್ರಪಂಚಕ್ಕೆ ಪ್ರಸಾರ ಮಾಡಿದಾಗ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಪ್ರಧಾನ ಅಭ್ಯಾಗತರಾಗಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಭಾರತ ಆಧ್ಯಾತ್ಮಿಕ ಹಾಗೂ ಸಂಸ್ಕಾರಯುತ ವಿಷಯಗಳ ತವರು. ಈ ರಕ್ಷಾ ಬಂಧನಕ್ಕೆ ಪೌರಾಣಿಕವಾಗಿ ಹಾಗೂ ಐತಿಹಾಸಿಕವಾಗಿ ಅದರದ್ದೇ ಆದ ಹಿನ್ನೆಲೆಗಳಿವೆ ಎಂದು ಹೇಳಿದ ಅವರು ಶ್ರೀ ಕೃಷ್ಣ ಪರಮಾತ್ಮ ಹಾಗೂ ಶಿವಾಜಿ ಮಹಾರಾಜರ ಉಲ್ಲೇಖ ಮಾಡುತ್ತಾ, ಸಹೋದರ ಭಾವವನ್ನು ಮೈಗೂಡಿಸಿಕೊಂಡು, ಸದೃಢ ಭಾರತದ ನಿರ್ಮಾಣದಲ್ಲಿ ಕೈ ಜೋಡಿಸೋಣ ಎಂದರು.
ಅಭ್ಯಾಗತರು ಭಾರತಮಾತೆಗೆ ರಕ್ಷೆಯನ್ನು ಕಟ್ಟುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪಲತಾ ಬಿ.ಕೆ ಹಾಗೂ ಶ್ರೀಮತಿ ನಮಿತಾ ರಕ್ಷಾ ಬಂಧನದ ಮಹತ್ವವನ್ನು ಸಾರುವ ಗೀತೆಯನ್ನು ಹಾಡಿದರು. 10ನೇ ತರಗತಿಯ ಕುಮಾರಿ ಧಾತ್ರಿ ಮತ್ತು 7ನೇ ತರಗತಿಯ ಕುಮಾರಿ ಅನನ್ಯಾ ನಾವಡ ರಕ್ಷಾ ಬಂಧನದ ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಬಳಿಕ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಿಕ್ಷಕಿ ಶ್ರೀಮತಿ ಪದ್ಮಲಕ್ಷ್ಮೀ ವಂದಿಸಿದರು. ಶ್ರೀಮತಿ ಆಶಾ.ಕೆ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಶಿಕ್ಷಕ ಶ್ರೀ ಕಾರ್ತಿಕ್ ಕುಮಾರ್ ರಚಿಸಿ, ನಿರ್ದೇಶಿಸಿದ ರಕ್ಷಾ ಬಂಧನದ ಮಹತ್ವವನ್ನು ತಿಳಿಸುವ “ಶ್ರೀರಕ್ಷೆ” ಎಂಬ ಕಿರುಚಿತ್ರದ ಪೋಸ್ಟರ್ ಅನ್ನು ಅತಿಥಿಗಳು ಬಿಡುಗಡೆಗೊಳಿಸಿ ಶುಭ ಹಾರೈಸಿದರು.