
ವಿಜ್ಞಾನ ರಸಪ್ರಶ್ನೆ ಸ್ಪರ್ಧೆ – ರಾಜ್ಯ ಮಟ್ಟಕ್ಕೆ ಆಯ್ಕೆ
Saturday, February 9th, 2019ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ 5-2-2019 ರಂದು ಮಂಗಳೂರಿನ ಕಿಟಲ್ ಮೆಮೋರಿಯಲ್ ಪ್ರೌಢ ಶಾಲೆ, ಗೋರಿಗುಡ್ಡ, ಕಂಕನಾಡಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ರಾಕೇಶ್‌ಕೃಷ್ಣ ಹಾಗೂ ಎಂ. ವಿಶಾಖ್ ಕಾಮತ್ ಇವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.