QR Code Business Card
ಚಿತ್ರಕಲಾ ಸಂಘ ಉದ್ಘಾಟನೆ

ಚಿತ್ರಕಲಾ ಸಂಘ ಉದ್ಘಾಟನೆ

Saturday, July 8th, 2017

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 7-7-2017 ರಂದು ಚಿತ್ರಕಲಾ ಸಂಘ ಉದ್ಘಾಟಿಸಲಾಯಿತು. ನವೋದಯ ಪ್ರೌಢ ಶಾಲೆ ಬೆಟ್ಟಂಪಾಡಿಯ ಚಿತ್ರಕಲಾ ಶಿಕ್ಷಕರಾದ ಗೋಪಾಲ ಕೃಷ್ಣ ಚಿತ್ರಕಲಾ ಸಂಘವನ್ನು ದೀಪ ಬೆಳಗಿಸಿ ಚಿತ್ರ ರಚನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಹಿತ ನುಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಗುರುಗಳಾದ ಸತೀಶ ಕುಮಾರ ರೈ ಅವರು ಪ್ರಾಸ್ತಾವಿಕ ಮಾತನಾಡಿದರು. ಚಿತ್ರಕಲಾ ಶಿಕ್ಷಕರಾದ ಮಹೇಶ್ ಹಿರೆಮಣಿ ಸ್ವಾಗತಿಸಿ, ಟೀಲಾಕ್ಷ ವಂದಿಸಿದರು. ರಶ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಮಗುವಿನ ಭಾವನೆಗಳನ್ನು ಗೌರವಿಸಿ

ಮಗುವಿನ ಭಾವನೆಗಳನ್ನು ಗೌರವಿಸಿ

Wednesday, July 5th, 2017

ದಿನಾಂಕ 5-7-2017 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲ, ಪುತ್ತೂರು ಇಲ್ಲಿ 2 ನೇ ತರಗತಿಯ ಮಕ್ಕಳ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಮಗುವಿನ ಭಾವನೆಗಳನ್ನು ಕಟ್ಟಿಹಾಕಬೇಡಿ. ಅದರ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಮುಕ್ತ ಅವಕಾಶ ನೀಡಿ ಮಗುವಿನ ಸರ್ವಾಂಗೀಣ ಬೆಳವಣಿಗೆಯಲ್ಲಿ ತಂದೆ-ತಾಯಿಯರಿಬ್ಬರ ಪಾತ್ರ ಸಮಾನವಾದುದು ಎಂದು ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕಿ ಶ್ರೀಮತಿ ಕೃಷ್ಣವೇಣಿಯವರು ಹೇಳಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಚಂದ್ರಶೇಖರ್ ಉಪಸ್ಥಿತರಿದ್ದು, ಅಧ್ಯಕ್ಷೀಯ ನುಡಿಗಳನ್ನಾಡಿದರು. ಶಾಲಾ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ […]

ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ

ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ

Wednesday, July 5th, 2017

ಸರ್ವೋದಯ ಪ್ರೌಢಶಾಲೆ ಸುಳ್ಯಪದವು ಇಲ್ಲಿ ದಿನಾಂಕ 2-7-2017 ರಂದು ಡಾ| ಬಾಲಕೃಷ್ಣ ರೈ ಸ್ಮರಣಾರ್ಥ ನಡೆದ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಅಮೃತಾ ಭಟ್ ದ್ವಿತೀಯ ಬಹುಮಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

ಪರಿಸರ ಜಾಗೃತಿ ಅಭಿಯಾನ

ಪರಿಸರ ಜಾಗೃತಿ ಅಭಿಯಾನ

Saturday, July 1st, 2017

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿವೇಕಾನಂದ ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್ ವತಿಯಿಂದ ಪರಿಸರ ಜಾಗೃತಿ ಅಭಿಯಾನದ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ 1-7-2017 ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ವಲಯ ಅರಣ್ಯಾಧಿಕಾರಿ ಶ್ರೀ ಕಾರ್ಯಪ್ಪ ಮಾತನಾಡಿ, ಪರಿಸರಕ್ಕೆ ಆಮ್ಲಜನಕ ಬಿಡುಗಡೆಗೊಳಿಸಿ ನಮಗೆ ಶುದ್ಧಗಾಳಿ ಸಿಗುವಂತೆ ಮಾಡುವ ಗಿಡಮರಗಳ ರಕ್ಷಣೆಯ ಅವಶ್ಯಕತೆಯನ್ನು ತಿಳಿಸಿದರು. ಇನ್ನೋರ್ವ ಅತಿಥಿ ಶ್ರೀಮತಿ ವಿದ್ಯಾಗೌರಿ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಮಾಡಿ, ಗಿಡಗಳನ್ನು ನೆಟ್ಟು, ಪೋಷಿಸಿ ಸಂರಕ್ಷಿಸುವುದು […]

ವಿದ್ಯಾರ್ಥಿ ನಾಯಕರ ಆಯ್ಕೆ

ವಿದ್ಯಾರ್ಥಿ ನಾಯಕರ ಆಯ್ಕೆ

Tuesday, June 27th, 2017

ವಿದ್ಯಾರ್ಥಿಗಳಿಗೆ ಚುನಾವಣೆ ಪ್ರಕ್ರಿಯೆಯ ಸ್ಥೂಲ ಪರಿಚಯ ನೀಡುವ ನಿಟ್ಟಿನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕ-ನಾಯಕಿಯರ ಚುನಾವಣೆಯು ದಿನಾಂಕ 27-6-2017 ರಂದು ಶಾಲಾ ಆವರಣದಲ್ಲಿ ನಡೆಯಿತು. ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸರತಿ ಸಾಲಿನಲ್ಲಿ ಬಂದು ತಮ್ಮ ನೆಚ್ಚಿನ ನಾಯಕ-ನಾಯಕಿಯರಿಗೆ ಮತ ಚಲಾಯಿಸಿದರು. ಪ್ರೌಢ ಶಾಲಾ ವಿದ್ಯಾರ್ಥಿ ನಾಯಕನಾಗಿ ಅಭಿಲಾಷ್.ಕೆ (10ನೇ ತರಗತಿ) ಉಪನಾಯಕನಾಗಿ ಅದಿತ್ (9ನೇ ತರಗತಿ) ಹಾಗೂ ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿ ನಾಯಕಿಯಾಗಿ ನೇಹಾ ಭಟ್ (7ನೇ ತರಗತಿ) ಮತ್ತು ಉಪನಾಯಕನಾಗಿ ಸುಶಾನ್‌ಪ್ರಕಾಶ್ […]

ಕೆಮ್ಮಿಂಜೆ ಗ್ರಾಮದಲ್ಲಿ ಕೋಟಿ ವೃಕ್ಷ ಆಂದೋಲನ

ಕೆಮ್ಮಿಂಜೆ ಗ್ರಾಮದಲ್ಲಿ ಕೋಟಿ ವೃಕ್ಷ ಆಂದೋಲನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಸಮರ್ಥ ಭಾರತ ಪುತ್ತೂರು ಘಟಕ ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿವೇಕ ನಗರ ಪುತ್ತೂರು ಇದರ ನೇತೃತ್ವದಲ್ಲಿ ಕೆಮ್ಮಿಂಜೆ ಗ್ರಾಮದ ’ಕೋಟಿ ವೃಕ್ಷ ಆಂದೋಲನಕ್ಕೆ ಸಸಿ ನೆಡುವುದರ ಮೂಲಕ ಚಾಲನೆ ನೀಡಲಾಯಿತು. ಸಭಾಧ್ಯಕ್ಷತೆಯನ್ನು ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದ ಕಾರ್ಯಾಧ್ಯಕ್ಷರಾದ ಶ್ರೀಯುತ ಮುರಳೀಧರ ಬಂಗಾರಡ್ಕ ವಹಿಸಿ ಪ್ರಕೃತಿಯೊಂದಿಗೆ ನಾವು ಬೆಳೆಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ಎ.ಪಿ.ಎಮ್.ಸಿಯ ಸದಸ್ಯರಾದ ಶ್ರೀಮತಿ ತ್ರಿವೇಣಿ ಕರುಣಾಕರ ಪೆರ್‍ವೋಡಿ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ […]

ವಿಟ್ಲ ಮುಡ್ನೂರುನಲ್ಲಿ ಕೋಟಿ ವೃಕ್ಷ ಆಭಿಯಾನ

ವಿಟ್ಲ ಮುಡ್ನೂರುನಲ್ಲಿ ಕೋಟಿ ವೃಕ್ಷ ಆಭಿಯಾನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಸಮರ್ಥ ಭಾರತ ಪುತ್ತೂರು ಘಟಕ ಇವರ ವತಿಯಿಂದ ಕೋಟಿ ವೃಕ್ಷ ಆಭಿಯಾನದ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಗುಣಶ್ರೀ ವಿದ್ಯಾಲಯ, ಕುಂಡಡ್ಕ, ದ.ಕ.ಜಿ.ಪಂ. ಹಿ. ಪ್ರಾ. ಶಾಲೆ, ಕುಂಡಡ್ಕ ಮತ್ತು ದ.ಕ.ಜಿ.ಪಂ. ಹಿ. ಪ್ರಾ. ಶಾಲೆ, ನಾಟೆಕಲ್ಲು ಈ ಮೂರು ಶಾಲೆಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀಯುತ ವೆಂಕಟೇಶ್ವರ ಅಮೈ ಇವರ ಅಧ್ಯಕ್ಷತೆಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗುಣಶ್ರೀ ವಿದ್ಯಾಲಯ ಕುಂಡಡ್ಕದಲ್ಲಿ ಮುಖ್ಯ ಅತಿಥಿಗಳಾಗಿ […]

ನರಿಮೊಗರು : ಕೋಟಿ ವೃಕ್ಷ ಆಂದೋಲನ

ನರಿಮೊಗರು : ಕೋಟಿ ವೃಕ್ಷ ಆಂದೋಲನ

Friday, June 23rd, 2017

ವಿವೇಕಾನಂದ ವಿದ್ಯಾವರ್ದಕ ಸಂಘ ಮತ್ತು ಸಮರ್ಥ ಭಾರತ ಪುತ್ತೂರು ಘಟಕ ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಜೊತೆಗೂಡಿ ನಡೆದ ಕೋಟಿ ವೃಕ್ಷ ಆಂದೋಲವು ನರಿಮೊಗರು ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ನಡೆಯಿತು. ಬೆಳಿಗ್ಗೆ ಸರಿಸುಮಾರು 9.30 ಕ್ಕೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 22 ವಿದ್ಯಾರ್ಥಿಗಳು ಮತ್ತು 4 ಶಿಕ್ಷಕರೊಂದಿಗೆ ಶಾಲಾ ವಾಹನದಲ್ಲಿ ಹೊರಟು, ಕಾರ್ಯಸ್ಥಾನವನ್ನು ತಲುಪಿದೆವು. ಆಂದೋಲನದ ಪ್ರಯುಕ್ತ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ಅದ್ಯಕ್ಷ ಸ್ಥಾನದಿಂದ ಮಾತನಾಡಿ, […]

ಬೆಟ್ಟಂಪಾಡಿಯಲ್ಲಿ ಕೋಟಿ ವೃಕ್ಷ ಅಭಿಯಾನ

ಬೆಟ್ಟಂಪಾಡಿಯಲ್ಲಿ ಕೋಟಿ ವೃಕ್ಷ ಅಭಿಯಾನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಸಮರ್ಥ ಭಾರತ ಪುತ್ತೂರು ಘಟಕ ಇವರ ವತಿಯಿಂದ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಬೆಟ್ಟಂಪಾಡಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಹಿರಿಯರಾದ ಸಂಜೀವ ರೈಯವರು ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿನೋದ್ ಬಲ್ಲಾಳ್ ಇವರಿಗೆ ಸಸಿ ವಿತರಣೆ ಮಾಡುವ ಮೂಲಕ ಚಾಲನೆಗೊಳಿಸಿ, ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು. ಹಿರಿಯರಾದ ವೆಂಕಟ್ರಾಯರು ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಕೋಟಿ ವೃಕ್ಷ ಅಭಿಯಾನದ ಸಂಘಟಕ […]

 ಪಾಣಾಜೆ ಗ್ರಾಮದಲ್ಲಿ ಕೋಟಿ ವೃಕ್ಷ ಆಂದೋಲನ

 ಪಾಣಾಜೆ ಗ್ರಾಮದಲ್ಲಿ ಕೋಟಿ ವೃಕ್ಷ ಆಂದೋಲನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಸಮರ್ಥ ಭಾರತ ಪುತ್ತೂರು ಘಟಕ ಇವರ ವತಿಯಿಂದ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಪಾಣಾಜೆ ಗ್ರಾಮದ ಪೂಮಣಿ-ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾರಾಯಣ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಮುರಳೀಧರ ಪ್ರಾಸ್ತಾವಿಕ ಮಾತುಗಳೊಂದಿಗೆ ಶುಭ ಹಾರೈಸಿದರು. ಪಾಣಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಂದ್ರ ರೈ, […]