
10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
Monday, March 21st, 2016ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇದರ 2015-16 ನೇ ಶೈಕ್ಷಣಿಕ ಸಾಲಿನ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ದಿನಾಂಕ 18-03-2016 ನೇ ಶುಕ್ರವಾರ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಡಾ. ಕೃಷ್ಣ ಭಟ್ ಕೆ. ಸಭಾಧ್ಯಕ್ಷತೆ ವಹಿಸಿ ಮಾತನಾಡುತ್ತಾ ವಿದ್ಯಾರ್ಜನೆಯು ಉದ್ಯೋಗಕ್ಕೆ ಮಾತ್ರ ಸೀಮಿತವಾಗದೆ, ಸಮಾಜವನ್ನು ತಿದ್ದುವ ಮತ್ತು ನಮ್ಮ ಕಿರಿಯರಿಗೆ ಮಾರ್ಗದರ್ಶನ ನೀಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಬೇಕೆಂದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ಯೋಜನೆ ’ಯಶಸ್’ ಇದರ ನಿರ್ದೇಶಕರಾದ ವಿಶ್ವೇಶ್ವರ […]