
ವಿವೇಕಾನಂದ ಆಂಗ್ಲ ಮಾಧ್ಯಮ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ
Tuesday, September 22nd, 2015ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಬೆಂಗಳೂರಿನ ನೆರಳೂರಿನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮದ 14 ವಿದ್ಯಾರ್ಥಿಗಳು ಭಾಗವಹಿಸಿ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ. ಕ್ಷೇತ್ರೀಯ ಮಟ್ಟ ಕ್ರೀಡಾ ಕೂಟವು ಅಕ್ಟೋಬರ್ 10, 11 ಮತ್ತು 12 ರಂದು ಹೈದರಾಬಾದಿನಲ್ಲಿ ನಡೆಯಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.