ನಮ್ಮ ಶಾಲಾ 10 ನೇ ತರಗತಿಯ ವಿದ್ಯಾರ್ಥಿ ಗೌತಮ್.ಕೆ.ಪಿ ಎರಡನೇ ಬಾರಿಗೆ National Talent Search Exam ನಲ್ಲಿ ರಾಜ್ಯಮಟ್ಟದಲ್ಲಿ 17ನೇ ರ್‍ಯಾಂಕ್ ಪಡೆದು ರಾಷ್ಟ್ರಮಟ್ಟದ ಪರೀಕ್ಷೆ ಬರೆಯಲು ಆಯ್ಕೆಯಾಗಿದ್ದಾನೆ. ಡಿ.ಎಸ್.ಇ.ಆರ್.ಟಿ.ಯು ಈ ಪರೀಕ್ಷೆಯನ್ನು ಆಯೋಜಿಸುತ್ತಿದೆ.
ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2013ರ ನವೆಂಬರ್‌ನಲ್ಲಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿಶಾಂಶ ಲಭಿಸಿರುತ್ತದೆ. ಶಾಲೆಯಿಂದ ಒಟ್ಟು 59 ವಿದ್ಯಾರ್ಥಿಗಳು ಲೋವರ್ ಗ್ರೇಡ್ ಮತ್ತು ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾಗಿದ್ದು, 11 ವಿಶಿಷ್ಟ ಶ್ರೇಣಿ, 35 ಪ್ರಥಮ ಶ್ರೇಣಿ, 13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ 100% ಫಲಿಶಾಂಶ ಲಭಿಸಿರುತ್ತದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ರಾಜ್‌ಕುಮಾರ್.ಕೆ, […]
ದಿನಾಂಕ ೧೪.೧೨.೨೦೧೩ನೇ ಶನಿವಾರದಂದು ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾಲಾ ಆಡಳಿತ ಮಂಡಳಿ ಸದಸ್ಯೆ ಡಾ.ಸುಲೇಖ ವರದರಾಜ್ ಮಾತನಾಡಿ, ಶಿಕ್ಷಣವೆಂದರೆ ಮಕ್ಕಳನ್ನು ಕೇವಲ ಅಂಕಗಳಿಗೆ ಸೀಮಿತವಾಗಿ ನೀಡುವ ಶಿಕ್ಷಣವಲ್ಲ. ಕೇವಲ ಪಠ್ಯಪುಸ್ತಕದಿಂದ ಪಡೆಯುವ ಶಿಕ್ಷಣದಿಂದ ಮಕ್ಕಳ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿಲ್ಲ. ಅಂಕಗಳಿಗೆ ಸೀಮಿತವಾಗಿ ಪಡೆಯುವ ಶಿಕ್ಷಣದಿಂದ ಅವರ ಮುಂದಿನ ಜೀವನದಲ್ಲಿ ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿ ಮಕ್ಕಳಿಗೆ ಮಾನವತೆಯ ಕೌಶಲ್ಯಾಧಾರಿತ ಶಿಕ್ಷಣ ನೀಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಪುರಸಭಾ ಅಧ್ಯಕ್ಷೆ ಶ್ರೀಮತಿ ವಾಣಿಶ್ರೀಧರ್ […]
ವಿವೇಕಾನಂದ ವಿದ್ಯಾಸಂಸ್ಥೆಗಳು, ವಿವೇಕನಗರ, ಪುತ್ತೂರು, ಇಲ್ಲಿ ನೂತನವಾಗಿ ನಿರ್ಮಿಸಲಾಗುವ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ಕಟ್ಟೆಗೆ ದಿನಾಂಕ 09.12.2013ರ ಸೋಮವಾರ ಶಿಲಾನ್ಯಾಸ ಮತ್ತು ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ನನ್ಯ ಅಚ್ಯುತ ಮೂಡಿತ್ತಾಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶ್ರೀ ಎಸ್.ಆರ್.ರಂಗಮೂರ್ತಿ, ಕಾರ್ಯದರ್ಶಿ ಶ್ರೀ ಶಿವಪ್ರಸಾದ್.ಇ, ಕಾರ್ಯ ನಿರ್ವಹಣಾ ನಿರ್ದೇಶಕರಾದ ಪ್ರೋ| ಎ.ವಿ.ನಾರಾಯಣ ಹಾಗೂ ಸಂಸ್ಥೆಯ ಸಂಚಾಲಕ ಶ್ರೀ ರವೀಂದ್ರ.ಪಿ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಪೋಷಕರು, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ […]
ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇದರ2013-14ನೇ ಸಾಲಿನ ವಾರ್ಷಿಕ ಕ್ರೀಡಾಕೂಟ 02.12.2013 ರಂದು ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶ್ರೀ ಪ್ರವೀಣ್‌ಚಂದ್ರ ಆಳ್ವ, ಖ್ಯಾತ ಕಬಡ್ಡಿ ಆಟಗಾರ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಮಾನಸಿಕ ಒತ್ತಡಗಳನ್ನು ದೂರಮಾಡುತ್ತದೆ ಎಂದು ಹೇಳಿದರು. ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡು ಸಮಾಜದಲ್ಲಿ ಶ್ರೇಷ್ಠ ಕ್ರೀಡಾಳುಗಳ ಸಾಲಿಗೆ ಸೇರುವುದರ ಜೊತೆಗೆ ದೈಹಿಕ ಕ್ಷಮತೆಯನ್ನು ಸಾಧಿಸಬಹುದು ಎಂದರು. ಶ್ರೀ ಸುಂದರ ಗೌಡ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, […]